Job news :ವಿಕಲಚೇತನರ ಪುನರ್ವಸತಿ ಕೇಂದ್ರ: ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

 

ಬೆಂಗಳೂರು ಗ್ರಾಮಾಂತರ ಜಿಲ್ಲೆ, : ಬೆಂಗಳೂರು ಗ್ರಾಮಾಂತರ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಗೌರವಧನದ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಫಿಸಿಯೋ ಥೆರಪಿಸ್ಟ್ (ಸಿಬಿಆರ್) ಹುದ್ದೆಗೆ ಬ್ಯಾಚುಲರ್ ಇನ್ ಫಿಸಿಯೋ ಥೆರಪಿಸ್ಟ್ ಅಥವಾ ಮಾಸ್ಟರ್ ಇನ್ ಫಿಸಿಯೋ ಥೆರಪಿಸ್ಟ್ ವಿದ್ಯಾರ್ಹತೆ ಹೊಂದಿರುವ ಮತ್ತು ಆಡಿಯೋಲಜಿಸ್ಟ್ ಅಂಡ್ ಸ್ಪೀಚ್ ಥೆರಪಿಸ್ಟ್ ಹುದ್ದೆಗೆ ಮಾಸ್ಟರ್ ಇನ್ ಆಡಿಯೋಲಾಜೀ ಮತ್ತು ಸ್ಪೀಚ್ ಥೇರಪಿ ವಿದ್ಯಾರ್ಹತೆ ಹೊಂದಿರಬೇಕು. ಆಯ್ಕೆಯಾದವರಿಗೆ ಮಾಸಿಕ 25,000/- ಗಳ ಗೌರವಧನ ನೀಡಲಾಗುವುದು.
ಆಸಕ್ತರು ತಮ್ಮ 2022ರ ಮಾರ್ಚ್ 20 ರೊಳಗೆ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ, ಹಳೆ ಹೆರಿಗೆ ಆಸ್ಪತ್ರೆ ದೊಡ್ಡಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಇ-ಮೇಲ್ ಐಡಿ: ddrcbangalorerural@gmail.com ಇಲ್ಲಿಗೆ ಸಲ್ಲಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *