Job News : ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ

ಜಾಬ್ ಡೆಸ್ಕ್ :

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ರಾಜ್ಯ ಪೊಲೀಸ್ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಒಟ್ಟು 1500 ಸ್ಥಾನಗಳನ್ನು ಭರ್ತಿ ಮಾಡಲಿದೆ. ಆಸಕ್ತರು ಏ. 1ರಿಂದ 30ರವರೆಗೆ ಕರ್ನಾಟಕ ರಾಜ್ಯ ಪೊಲೀಸ್ ವೆಬ್‌ಸೈಟ್ ಮೂಲಕ ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿ ಯುಜಿಸಿಯಿಂದ ಮಾನ್ಯತೆ ಪಡೆದಿರುವ ಅಂಗೀಕೃತ ಯಾವುದೇ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿ ಪಡೆದಿರಬೇಕು. ಕನಿಷ್ಠ 21 ವರ್ಷ ವಯೋಮಾನದವರಾಗಿರಬೇಕು. ಪ.ಜಾತಿ, ಪ.ಪಂ, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ 28 ವರ್ಷ, ಇತರೆ ಅಭ್ಯರ್ಥಿಗಳಿಗೆ ಗರಿಷ್ಠ 26 ವರ್ಷ ವಯೋಮಾನ ಮೀರಬಾರದು.ಅರ್ಜಿ ಸಲ್ಲಿಸಲು www.https://ksp.karnataka.gov.in/info-3/Recruitment/kn ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

 

 

 

 

Leave a Reply

Your email address will not be published. Required fields are marked *