25 ವರ್ಷದ ಯುವತಿಯನ್ನು ಮದುವೆಯಾಗಿ ರಾಜ್ಯದ್ಯಂತ ಸಂಚಲನ ಮೂಡಿಸಿದ್ದ ಶಂಕ್ರಣ್ಣ ಆತ್ಮಹತ್ಯೆಗೆ ಶರಣು

ತುಮಕೂರು: 25 ವರ್ಷದ ಯುವತಿಯನ್ನು ಮದುವೆಯಾಗಿದ್ದ (Marriage) 45 ವರ್ಷದ ಶಂಕರಣ್ಣ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ. ಈ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗ ಹೋಬಳಿಯ ಅಕ್ಕಿಮರಿ ಪಾಳ್ಯದಲ್ಲಿ ಸಂಭವಿಸಿದೆ. ಸುಮಾರು 5 ತಿಂಗಳ ಹಿಂದೆ ಈ ಜೋಡಿ ರಾಜ್ಯಾದ್ಯಂತ ಬಾರಿ ಸಂಚಲನ ಮೂಡಿಸಿತ್ತು. 25 ವರ್ಷದ ಯುವತಿಯನ್ನು 45 ವರ್ಷದ ಶಂಕರಣ್ಣ ಮದುವೆಯಾಗಿದ್ದರು. ವಯಸ್ಸಿನ ಅಂತರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಆಗಿತ್ತು.

ಶಂಕರಣ್ಣ ಜೊತೆ ಮೇಘಾನ ಮದುವೆಯಾಗಿದ್ದರು. ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗದಲ್ಲಿ ಕಳೆದ 5 ತಿಂಗಳ ಹಿಂದೆ ಮದುವೆ ನಡೆದಿತ್ತು. ಇಂದು ಬೆಳಗ್ಗೆ ತೋಟದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಕ್ಕಿಮರಿ ಪಾಳ್ಯದ ಶಂಕರಣ್ಣ ಮೃತದೇಹ ಪತ್ತೆಯಾಗಿದೆ. ಸದ್ಯಕ್ಕೆ ಹುಲಿಯೂರು ದುರ್ಗ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

 

Leave a Reply

Your email address will not be published. Required fields are marked *