ಸಿದ್ದಗಂಗಾ ಮಠ ಕ್ಕೆ ಅಮಿತ್ ಶಾ ಬೇಟಿ ಶ್ರಿ ಗಳಿಗೆ ಭಾರತ ರತ್ನ ಕ್ಕೇ ಒತ್ತಾಯಿಸುತ್ತೇನೆ – ಬಿ ಎಸ್ ಯಡಿಯೂರಪ್ಪ

ತುಮಕೂರು, ಮಾ.29- ಏಪ್ರಿಲ್ 1ರಂದು ಸಿದ್ಧಗಂಗಾ ಮಠದಲ್ಲಿ ನಡೆಯಲಿರುವ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ದೊಡ್ಡ ಪ್ರಮಾಣದಲ್ಲಿ ನಡೆಸಲು ನಿರ್ಧರಿಸಲಾಗಿದೆ.ಈ ಕಾರ್ಯಕ್ರಮಕ್ಕೆ ಸುಮಾರು 2ಲಕ್ಷ ಮಂದಿ ಸೇರಬಹುದೆಂಬ ನಿರೀಕ್ಷೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ

ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವ ಕುರಿತಂತೆ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದರು.

ಏ.1ರಂದು ಅಮಿತ್ ಶಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಧ್ಯಾಹ್ನ ಬೆಂಗಳೂರಿಗೆ ತೆರಳಿ ಪಕ್ಷದ ಮುಖಂಡರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಬಿಎಸ್‍ವೈ ಮಾಹಿತಿ ನೀಡಿದರು.

Leave a Reply

Your email address will not be published. Required fields are marked *