ಬಳ್ಳಾರಿ, ಮಾ.29- ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ನೇಮಕಗೊಂಡಿದ್ದ ಶಿಕ್ಷಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಸಿ.ಎಸ್. ಮುಧೋಳ್ ಮೃತ ಶಿಕ್ಷಕ.

ನಿನ್ನೆ ಪರೀಕ್ಷಾ ಕಾರ್ಯ ಮುಗಿಸಿಕೊಂಡು ಮನೆಗೆ ಬರುತ್ತಿದ್ದಂತೆ ಶಿಕ್ಷಕರಿಗೆ ಹೃದಯಾಘಾತ ಸಂಭವಿಸಿದೆ. ಕೂಡಲೇ ಅವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಯಿತು.ಆದರೆ ಚಿಕಿತ್ಸೆ ಫಲಿಸದೆ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಸಿ.ಎಸ್ ಮುಧೋಳ್ ಅವರು ಬಳ್ಳಾರಿಯ ಎಸ್‍ಎಂವಿವಿ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ನಿನ್ನೆಯಿಂದ ಆರಂಭವಾದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ನಿಯೋಜನೆ ಮಾಡಲಾಗಿತ್ತು.
