ನಾಸಿಕ್ ಬಳಿ ಹಳಿ ತಪ್ಪಿದ ಲೋಕಮಾನ್ಯ ತಿಲಕ್​ ಎಕ್ಸ್​​ಪ್ರೆಸ್​ ರೈಲು

ನಾಸಿಕ್​ (ಮಹಾರಾಷ್ಟ್ರ): ಎಕ್ಸ್​​ಪ್ರೆಸ್​ ರೈಲೊಂದು ಹಳಿ ತಪ್ಪಿರುವ ಘಟನೆ ಮಹಾರಾಷ್ಟ್ರದ ನಾಸಿಕ್​ ಬಳಿ ಭಾನುವಾರ(ಇಂದು) ಮಧ್ಯಾಹ್ನ ಸಂಭವಿಸಿದೆ. ಈ ಘಟನೆಯಲ್ಲಿ ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂಬ ಬಗ್ಗೆ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಮಧ್ಯಾಹ್ಮ 3.10ರ ಸುಮಾರಿಗೆ ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಸ್​-ಜಯನಗರ ಎಕ್ಸ್​​ಪ್ರೆಸ್ (11061)​ನ ಬೋಗಿಗಳು ಇಲ್ಲಿನ ಲಹವಿತ್ ಮತ್ತು ದೇವಲಾಲಿ ಮಾರ್ಗ ಮಧ್ಯೆ ಹಳಿ ತಪ್ಪಿವೆ.

ಸ್ಥಳಕ್ಕೆ ರೈಲ್ವೆ ಪೊಲೀಸರು ಮತ್ತು ತಹಶೀಲ್ದಾರ್ ದೌಡಾಯಿಸಿದ್ದು, ಪರಿಹಾರ ಕಾರ್ಯಗಳು ನಡೆಯುತ್ತಿವೆ. ರೈಲು ಹಳಿ ತಪ್ಪಿದ ಕಾರಣ ಈ ಮಾರ್ಗದಲ್ಲಿ ರೈಲು ಸಂಚಾರ ಅಸ್ತವ್ಯಸ್ತಗೊಂಡಿದೆ. ಇತರೆ ರೈಲುಗಳನ್ನು ಬೇರೆ ಮಾರ್ಗಗಳಿಗೆ ತಿರುಗಿಸಲಾಗಿದೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

ಈ ಘಟನೆಯಲ್ಲಿ ಓರ್ವ ಪ್ರಯಾಣಿಕರ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

Leave a Reply

Your email address will not be published. Required fields are marked *