ಭಾರತದ ಜೊತೆ £1 ಬಿಲಿಯನ್ ಹೂಡಿಕೆ ಒಪ್ಪಂದ ಘೋಷಿಸಿದ ಬ್ರಿಟನ್‌ ಪ್ರಧಾನಿ!

ಅಹಮದಾಬಾದ್​​(ಗುಜರಾತ್​): ಎರಡು ದಿನಗಳ ಭಾರತದ ಪ್ರವಾಸದಲ್ಲಿರುವ ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್​ ಮಹತ್ವದ ಘೋಷಣೆ ಹೊರಹಾಕಿದ್ದು, ಭಾರತದಲ್ಲಿ ಒಂದು ಬಿಲಿಯನ್ ಪೌಂಡ್‌ ಹೂಡಿಕೆ ಮಾಡುವ ಘೋಷಣೆ ಮಾಡಿದ್ದಾರೆ. ವ್ಯಾಪಾರ, ಹೂಡಿಕೆ ಮತ್ತು ತಂತ್ರಜ್ಞಾನದಲ್ಲಿ ಇಷ್ಟೊಂದು ಮೊತ್ತ ಹೂಡಿಕೆ ಮಾಡುವ ಒಪ್ಪಂದವನ್ನು ಅವರು ಪ್ರಕಟಿಸಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಬ್ರಿಟಿಷ್ ಹೈಕಮಿಷನ್​ ಪ್ರಕಟಣೆ ಹೊರಡಿಸಿದ್ದು, ಭಾರತದೊಂದಿಗೆ ಬಾಂಧವ್ಯ ವೃದ್ಧಿಸಲು ಬೋರಿಸ್ ಜಾನ್ಸನ್ ಭಾರತಕ್ಕೆ ಭೇಟಿ ನೀಡಿದ್ದು, ಉಭಯ ದೇಶಗಳು ಅನೇಕ ವ್ಯವಹಾರಗಳಿಗೆ ಸಂಬಂಧಿಸಿದಂತೆ ಒಪ್ಪಂದ ಮಾಡಿಕೊಳ್ಳಲಿವೆ ಎಂದಿದೆ. ಸಾಫ್ಟ್‌ವೇರ್ ಇಂಜಿನಿಯರಿಂಗ್​​ನಿಂದ ಹಿಡಿದು ಆರೋಗ್ಯ ಕ್ಷೇತ್ರದವರೆಗೆ ಇದೀಗ ಬ್ರಿಟನ್ ಹೂಡಿಕೆ ಮಾಡಲು ನಿರ್ಧರಿಸಿದ್ದು, ಅದಕ್ಕಾಗಿ £1 ಬಿಲಿಯನ್​ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದಿದ್ದು, ಇದರಿಂದ 11,000 ಸಾವಿರ ಉದ್ಯೋಗ ಸೃಷ್ಟಿ ನಿರೀಕ್ಷೆ ಇದೆ.

ಬ್ರಿಟಿಷ್ ಪ್ರಧಾನಿ ಇಂದು ಗುಜರಾತ್​​ನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದು, ನಾಳೆ ದೆಹಲಿಗೆ ಪ್ರಯಾಣ ಕೈಗೊಳ್ಳಲಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಜೊತೆ ಮಹತ್ವದ ಮಾತುಕತೆಯಲ್ಲಿ ಭಾಗಿಯಾಗಲಿದ್ದಾರೆ

Leave a Reply

Your email address will not be published. Required fields are marked *