ವ್ಯಕ್ತಿ-ಸಂಸ್ಥೆಗಳಿಗೆ ರಾಷ್ಟ್ರಪ್ರಶಸ್ತಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ದಾವಣಗೆರೆ :
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಬೆಂಗಳೂರು ವತಿಯಿಂದ ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯು 2022ನೇ ಸಾಲಿನಲ್ಲಿ ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ/ಸಂಸ್ಥೆಗಳಿಗೆ ರಾಷ್ಟ್ರ ಪ್ರಶಸ್ತಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆನ್‍ಲೈನ್‍ನಲ್ಲಿ ವೆಬ್‍ಸೈಟ್ www.awards.gov.in ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆ.28 ಕೊನೆಯದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳ ಕಛೇರಿ, ಶಂಕರಲೀಲಾ ಗ್ಯಾಸ್ ಏಜೆನ್ಸಿ ಹತ್ತಿರ, ಎಂ.ಸಿ.ಸಿ. ‘ಬಿ’ ಬ್ಲಾಕ್, ದಾವಣಗೆರೆ. ದೂ.ಸಂ: 08192-263939 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ.ಕೆ.ಕೆ. ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *