ಡಿಜೆ ಬಳಕೆಗೆ ಅವಕಾಶವಿಲ್ಲ; ಅಗತ್ಯ ಅನುಮತಿ ನೀಡಲು ಏಕಗವಾಕ್ಷಿ ವ್ಯವಸ್ಥೆ | ಜಿಲ್ಲಾಧಿಕಾರಿ

ಡಿಜೆ ಬಳಕೆಗೆ ಅವಕಾಶವಿಲ್ಲ; ಅಗತ್ಯ ಅನುಮತಿ ನೀಡಲು ಏಕಗವಾಕ್ಷಿ ವ್ಯವಸ್ಥೆ:

ಬೆಳಗಾವಿ :ಉತ್ಸವ ಸಂದರ್ಭದಲ್ಲಿ ಡಿಜೆ ಗೆ ಅವಕಾಶವಿಲ್ಲ; ಆದರೆ ನಿಗದಿತ ಪ್ರಮಾಣದ ಶಬ್ದ ಹೊರಸೂಸುವ “ಧ್ವನಿ”ವರ್ಧಕ ಬಳಕೆಗೆ ಸದ್ಯಕ್ಕೆ ಅವಕಾಶವಿರುತ್ತದೆ. ಬೆಳಿಗ್ಗೆ 6 ರಿಂದ ರಾತ್ರಿ 10 ರವರೆಗೆ ಧ್ವನಿವರ್ಧಕ ಬಳಕೆಗೆ ನಿಯಮಾವಳಿ ಪ್ರಕಾರ ಅನುಮತಿ ನೀಡಲಾಗುವುದು. ಏಕಗವಾಕ್ಷಿ ವ್ಯವಸ್ಥೆ ಮೂಲಕ ಆಯಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಅನುಮತಿಯನ್ನು ನೀಡಲಾಗುವುದು.

ಏಕಗವಾಕ್ಷಿ ವ್ಯವಸ್ಥೆ ಮೂಲಕ ಅರ್ಜಿ ಸಲ್ಲಿಸಿದ 24 ಗಂಟೆಗಳಲ್ಲಿ ಅನುಮತಿ ನೀಡಲು ಕ್ರಮ ಕೈಗೊಳ್ಳಲಾಗುವುದು.

ಪೊಲೀಸ್, ಹೆಸ್ಕಾಂ, ಮಾಲಿನ್ಯ ನಿಯಂತ್ರಣ ಮಂಡಳಿ, ಪಾಲಿಕೆ ಸೇರಿದಂತೆ ಎಲ್ಲ ಇಲಾಖೆಯ ಅಧಿಕಾರಿಗಳು ಒಂದೇ ಕಡೆ ಲಭ್ಯವಿದ್ದು, ಅಗತ್ಯ ಅನುಮತಿಯನ್ನು ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ಡಿಜೆ, ಧ್ವನಿವರ್ಧಕಗಳ ಬಳಕೆ, ಪಿಓಪಿ ಮೂರ್ತಿ ಬಳಕೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಸರಕಾರ ಮತ್ತು ಸುಪ್ರಿಂ ಕೋರ್ಟ್ ಹಲವಾರು ಆದೇಶಗಳನ್ನು ಮತ್ತು ಮಾರ್ಗಸೂಚಿಗಳನ್ನು ಹೊರಡಿಸಿವೆ.

ನ್ಯಾಯಾಲಯ ಹಾಗೂ ಸರಕಾರದ ಮಾರ್ಗಸೂಚಿ ಪ್ರಕಾರ ಉತ್ಸವ ಆಚರಣೆಗೆ ಅವಕಾಶ ಕಲ್ಪಿಸಲಾಗುವುದು.

ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯು ಏನೇ ಅನುಮತಿ ನೀಡಬೇಕಿದ್ದರೂ ನ್ಯಾಯಾಲಯ ಹಾಗೂ ಸರಕಾರದ ಮಾರ್ಗಸೂಚಿ ಅನ್ವಯವೇ ಅವಕಾಶವನ್ನು ಕಲ್ಪಿಸಲು ಸಾಧ್ಯವಿರುತ್ತದೆ.

ಆದ್ದರಿಂದ ಕಾಲಕಾಲಕ್ಕೆ ಹೊರಡಿಸಲಾಗುವ ಮಾರ್ಗಸೂಚಿ ಪ್ರಕಾರ ಹಬ್ಬಗಳ ಆಚರಣೆಗೆ ಅವಕಾಶ ನೀಡಲಾಗುವುದು

Leave a Reply

Your email address will not be published. Required fields are marked *