ಪ್ರವೀಣ್ ನೆಟ್ಟಾರು ಹತ್ಯೆ ತನಿಖೆಯ ಹೊಣೆ ಎನ್​ಐಎಗೆ

ಬೆಂಗಳೂರು: ಸುಳ್ಯ ತಾಲ್ಲೂಕು ಬೆಳ್ಳಾರೆ ಗ್ರಾಮದಲ್ಲಿ ನಡೆದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯ ಹೊಣೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (National Investigation Agency – NIA) ವಹಿಸಲಾಗಿದೆ. ಈ ಪ್ರಕರಣವು ಅಂತರರಾಜ್ಯ ನಂಟು ಹೊಂದಿರುವ ಹಿನ್ನೆಲೆಯಲ್ಲಿ ತನಿಖೆಯ ಹೊಣೆಯನ್ನು ಎನ್​ಐಎಗೆ ವಹಿಸಲು ಕರ್ನಾಟಕ ಸರ್ಕಾರವು ತೀರ್ಮಾನ ಮಾಡಿದೆ. ಪೊಲೀಸ್​ ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಮುಖ್ಯಮಂತ್ರಿ ಈ ನಿರ್ಧಾರ ತೆಗೆದುಕೊಂಡರು.

ದಕ್ಷಿಣ ಕನ್ನಡ ಮತ್ತು ಕೇರಳ ಗಡಿಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವ ಕುರಿತು ಚರ್ಚಿಸಲಾಗಿದೆ. ಪರಿಸ್ಥಿತಿ ನಿಯಂತ್ರಿಸಲು ದಕ್ಷಿಣ ಕನ್ನಡ ಜಿಲ್ಲೆಗೆ ರಾಜ್ಯ ಮೀಸಲು ಪಡೆಯ (KSRP) ಬೆಟಾಲಿಯನ್​​ ನಿಯೋಜಿಸಲಾಗುವುದು. ಸೂಕ್ಷ್ಮ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಫಾಜಿಲ್​ ಕೊಲೆ ಪ್ರಕರಣದ ತನಿಖೆಗೂ ಪೊಲೀಸರ ವಿಶೇಷ ತಂಡವನ್ನು ರಚಿಸಲಾಗಿದೆ. ಆ ಪ್ರಕರಣದ ತನಿಖೆಯೂ ಚುರುಕಾಗಿದೆ ಎಂದರು. ಶೀಘ್ರದಲ್ಲೇ ಎಲ್ಲ ಸಮುದಾಯದ ಮುಖಂಡರ ಜತೆ ಶಾಂತಿ ಸಭೆ ನಡೆಸಿ, ಶಾಂತಿ ಸುವ್ಯವಸ್ಥೆ ಕಾಪಾಡಲು ಮನವಿ ಮಾಡುತ್ತೇವೆ ಎಂದರು.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಕುರಿತು ಡಿಐಜಿ ಜೊತೆಗೆ ಚರ್ಚಿಸಿದ್ದೇನೆ. ಇದು ಸಂಘಟಿತ ಅಪರಾಧ ಮತ್ತು ಬೇರೆ ರಾಜ್ಯದವರು ಪಾಲ್ಗೊಂಡಿರುವ ಶಂಕೆಯಿದೆ. ಅಗತ್ಯ ಮಾಹಿತಿ ಕಲೆಹಾಕಿದ ಮೇಲೆ ಕೇರಳ ಸರ್ಕಾರಕ್ಕೂ ಪತ್ರ ಬರೆಯುತ್ತೇವೆ. ತನಿಖೆಯ ಹೊಣೆಯನ್ನು ಎನ್ಐಎಗೆ ವಹಿಸುತ್ತಿದ್ದೇವೆ ಎಂದರು.

 

Leave a Reply

Your email address will not be published. Required fields are marked *