ದಶಕಗಳ ಕಾಲದ ಜನರ ಕನಸು ನನಸು ಮಾಡುವತ್ತ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೆಜ್ಜೆ ಇರಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜನರ ಬಹುಕಾಲದ ಬೇಡಿಕೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಪ್ರಯತ್ನದಿಂದಾಗಿ ಸಫಲತೆಯತ್ತ ಹೆಜ್ಜೆ ಇಟ್ಟಿದೆ. ಕರಾವಳಿ, ಮಲೆನಾಡು ಹಾಗೂ ಬಯಲುಸೀಮೆಯಿಂದ ಸಮ್ಮಿಳಿತಗೊಂಡ ಭೌಗೋಳಿಕವಾಗಿ ಅತಿ ವಿಸ್ತೀರ್ಣ ಹೊಂದಿರುವ ಜಿಲ್ಲೆಗೆ ತುರ್ತುನಿಗಾ ಘಟಕ/ಟ್ರಾಮಕೇರ್ ಸೆಂಟರ್ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕೆಂಬುದು ಜನರ ಬಹುಕಾಲದ ಬೇಡಿಕೆ.
ಜನರ ಕಷ್ಟಕ್ಕೆ ಮಿಡಿಯುತಿರುವ ಚನ್ನಗಿರಿ ಯುವ ನೇತಾರ ಮಾಡಳ್ ಮಲ್ಲಿಕಾರ್ಜುನ್
ಕರಾವಳಿ, ಮಲೆನಾಡು ಹಾಗೂ ಬಯಲುಸೀಮೆಯಿಂದ ಸಮ್ಮಿಳಿತಗೊಂಡ ಭೌಗೋಳಿಕವಾಗಿ ಅತಿ ಹೆಚ್ಚು ವಿಸ್ತೀರ್ಣ ಹೊಂದಿರುವ ಉತ್ತರ ಕನ್ನಡ ಜಿಲ್ಲೆಗೆ ತುರ್ತುನಿಗಾ ಘಟಕ/ಟ್ರಾಮಕೇರ್ ಸೆಂಟರ್ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕೆಂಬುದು ಉತ್ತರ ಕನ್ನಡ ಜಿಲ್ಲೆ ಜನರ ಬಹುಕಾಲದ ಬೇಡಿಕೆ. ಈ ಸಂಬಂಧ ಉಸ್ತುವಾರಿ ಸಚಿವರು ಸಭೆ ನಡೆಸಿದಾಗೆಲ್ಲ ಬಹುತೇಕ ಇದು ಚರ್ಚೆಯ ಕಾರ್ಯಸೂಚಿಯಾಗಿರುತ್ತಿತ್ತು
ಈ ಸಂಬಂಧ ಸರ್ಕಾರ ಟ್ರಾಮಾಕೇರ್ ಸೆಂಟರ್ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರಿಗೆ ಉತ್ಸಾಹ ತೋರಿದ್ದರೂ ಜಿಲ್ಲಾ ಕೇಂದ್ರದಲ್ಲಿ ಜಾಗದ ಕೊರತೆ ಅಡ್ಡಿಯಾಗುತ್ತಿತ್ತು. ಇದೀಗ ಜಿಲ್ಲಾ ಉಸ್ತುವಾರಿ ಸಚಿವರ ಸತತ ಪ್ರಯತ್ನ ಹಾಗೂ ಸಲಹೆಗಳ ಮೇರೆಗೆ ಜಿಲ್ಲಾಡಳಿತ ಇದಕ್ಕೊಂದು ಪರಿಹಾರ ಕಂಡುಕೊಂಡಿದ್ದು, ಈ ಎರಡೂ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಪರಿಹಾರಕ್ರಮಗಳನ್ನು ಸೂಚಿಸಿ, ಶೀಘ್ರ ಅನುಷ್ಠಾನಕ್ಕೆ ಉತ್ತರ ಕನ್ನಡ ಜಿಲ್ಲಾಧಿಕಾರಿಯವರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ.
ಪಿಎಂ ಅಭೀಮ್ ವತಿಯಿಂದ 50 ಹಾಸಿಗೆಗಳ ತುರ್ತುನಿಗಾ ಘಟಕ/ ಟ್ರಾಮಾಕೇರ್ ಸೆಂಟರ್ ಸ್ಥಾಪಿಸಲು 2021-22ನೇ ಸಾಲಿನಲ್ಲಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಈಗಾಗಲೆ ಅನುಮೋದನೆ ನೀಡಿದ್ದು, ಅದನ್ನು ಅಂಕೋಲ ತಾಲೂಕಿನ ಹಟ್ಟಿಕೇರಿ ಪ್ರಾಥಮಿಕ ಆರೋಗ್ಯ ಕೇಂದ್ರ ಇಲ್ಲಿ ಸ್ಥಾಪಿಸುವುದು ಸೂಕ್ತವೆಂದು ಅವರು ತಮ್ಮ ಪ್ರಸ್ತಾವನೆಯಲ್ಲಿ ತಿಳಿಸಿದ್ದಾರೆ.
ಹಟ್ಟಿಕೇರಿ ರಾಷ್ಟ್ರೀಯ ಹೆದ್ದಾರಿ ಸಮೀಪವೇ ಇದ್ದು ಉದ್ದೇಶಿತ ನೌಕಾನೆಲೆಯ ನಾಗರಿಕ ವಿಮಾನ ನಿಲ್ದಾಣದಿಂದ ಕೇವಲ 2 ಕಿ.ಮೀ.ದೂರದಲ್ಲಿದೆ. ಅಲ್ಲದೆ ಜಿಲ್ಲಾ ಕೇಂದ್ರದಿಂದ ಕೇವಲ 25 ನಿಮಿಷಗಳ ಪ್ರಯಾಣವಾಗಿರುವುದರಿಂದ ಇಲ್ಲಿ ಟ್ರಾಮಾಕೇರ್ ಸೆಂಟರ್ ಸ್ಥಾಪಿಸುವುದರಿಂದ ಜಿಲ್ಲೆಯ ಜನರಿಗೆ ಅತ್ಯಂತ ಅನುಕೂಲವಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಅಂತೆಯೇಜಿಲ್ಲೆಯ ಜನರ ಬಹುಕಾಲದ ಬೇಡಿಕೆಯಾಗಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಲು ಕುಮಟಾ ತಾಲೂಕಿನ ಕುಮಟಾ ಹೋಬಳಿ ಹಾಗೂ ಮಿರ್ಜಾನ ಹೋಬಳಿಗಳ ಒಟ್ಟು ನಾಲ್ಕು ಕಡೆಗಳಲ್ಲಿ ಜಾಗವನ್ನು ಗುರುತಿಸಿದ್ದು, ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಯೊಂದಿಗೆ ಇದನ್ನು ಸ್ಥಾಪಿಸಲು ಅನುಕೂಲಕರವಾಗಿದೆ ಎಂಬುದು ಪ್ರಸ್ತಾವನೆಯ ಪ್ರಮುಖ ಅಂಶ.
ಇದರಿಂದ ಮುಂಡಗೋಡೆಯ ಹಳಿಯಾಳ, ಶಿರಸಿ ಸೇರಿಂದಂತೆ ಜಿಲ್ಲೆಯ ದೂರದೂರಿನಿಂದ ರೋಗಿಗಳನ್ನು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ಕರೆದೊಯ್ಯುವುದು ತಪ್ಪುತ್ತದೆ ಹಾಗೂ ಹೆಚ್ಚು ಜೀವಹಾನಿಯನ್ನು ತಪ್ಪಿಸಬಹುದು ಎಂದು ಅವರು ಹೇಳಿದ್ದಾರೆ.
ಹೀಗೆ ಈ ಎರಡೂ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ತೀವ್ರ ಪ್ರಯತ್ನ ನಡೆಸಿದ್ದು, ಜಿಲ್ಲೆಯ ಜನರ ಬಹುದಿನಗಳ ಕನಸು ನನಸಾಗುವ ಕಾಲ ಸನ್ನಿಹಿತವಾದಂತಾಗಿದೆ.