ಶೀಘ್ರವೇ 5000 ಪೇದೆ 450 ಸಬ್ ಇನ್ಸ್ಪೆಕ್ಟರ್ ನೇಮಕ – ಆರಗಾ ಜ್ಞಾನೇಂದ್ರ

ಬೆಂಗಳೂರು(ಆ.05): ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಇನ್ನಷ್ಟುಬಲಪಡಿಸಲು ಶೀಘ್ರದಲ್ಲಿ ಐದು ಸಾವಿರ ಪೊಲೀಸ್‌ ಕಾನ್‌ಸ್ಟೇಬಲ್‌ ಹಾಗೂ 450 ಪೊಲೀಸ್‌ ಸಬ್‌ ಇನ್‌ಸ್ಟೆಕ್ಟರ್‌ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಗುರುವಾರ ವಿಕಾಸಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನೇಮಕಾತಿ ಸಂಬಂಧ ಶೀಘ್ರದಲ್ಲಿ ಅಧಿಸೂಚನೆ ಹೊರಡಿಸಲಾಗುವುದು. ಪರೀಕ್ಷೆಗಳನ್ನು ಹೇಗೆ ಮಾಡಿಕೊಳ್ಳಬಹುದು ಎಂಬುದನ್ನು ತೋರಿಸಿಕೊಡುತ್ತೇವೆ ಎಂದರು. ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಪಟ್ಟ545 ಹುದ್ದೆಗಳಿಗೆ ತನಿಖೆ ಮುಗಿದ ನಂತರ ಮರು ಪರೀಕ್ಷೆ ದಿನಾಂಕ ಪ್ರಕಟಿಸಲಾಗುವುದು. ವಯೋಮಿತಿ ಸಡಿಲಿಕೆ ನೀಡಲಾಗುವುದು. ಹಾಗಾಗಿ ಯಾರೂ ಆತಂಕ ಪಡುವ ಅವಶ್ಯಕತೆ ಇರುವುದಿಲ್ಲ ಎಂದರು. ಅಕ್ರಮದಲ್ಲಿ ಭಾಗಿಯಾದವರಿಗೆ ಮರುಪರೀಕ್ಷೆಯಲ್ಲಿ ಅವಕಾಶ ನೀಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

 

Leave a Reply

Your email address will not be published. Required fields are marked *