SDPI – PFI ಸಂಘಟನೆಯನ್ನು ನಿಷೇಧ ಮಾಡದಿದ್ದರೆ ಸಿಕ್ಕಸಿಕ್ಕಲ್ಲಿ ನಾವೇ ಹೊಡೆಯುತ್ತೇವೆ

ಧಾರವಾಡ: ದೇಶದಲ್ಲಿ ಕರ್ನಾಟಕವೂ ಸೇರಿ ಹಲವು ರಾಜ್ಯಗಳಲ್ಲಿ ನಡೆದ ಹಿಂದೂ ಕಾರ್ಯಕರ್ತರ ಕೊಲೆಯಲ್ಲಿ ಬಹುತೇಕ ಪಿಎಫ್‍ಐ ಹಾಗೂ ಎಸ್‍ಡಿಪಿಐ ಸಂಘಟನೆಗಳ ಕೈವಾಡವೇ ಇದೆ. ಆದ್ದರಿಂದ ಈ ಸಂಘಟನೆಗಳನ್ನು ಬ್ಯಾನ್ ಮಾಡದೇ ಹೋದಲ್ಲಿ ಆ ಸಂಘಟನೆಗಳ ಕಾರ್ಯಕರ್ತರನ್ನು ನಾವೇ ನುಗ್ಗಿ ಹೊಡೆಯಬೇಕಾಗುತ್ತದೆ ಎಂದು ಶ್ರೀರಾಮ ಸೇನೆ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ  ಹೇಳಿಕೆ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಎಸ್‍ಡಿಪಿಐ ಹಾಗೂ ಪಿಎಫ್‍ಐ ಸಂಘಟನೆಗಳು ಅಶಾಂತಿ ಸೃಷ್ಟಿಸುವುದರ ಜೊತೆಗೆ ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡುತ್ತಿವೆ ಎಂದು ಕಿಡಿಕಾರಿದ್ದಾರೆ.

Leave a Reply

Your email address will not be published. Required fields are marked *