ಎನ್​ಎಲ್​ಸಿ ನೇಮಕಾತಿ: 481 ಹುದ್ದೆಗಳಿಗೆ ಅರ್ಜಿ ಆಹ್ವಾನ

NLC India Recruitment 2022: ಸರ್ಕಾರಿ ಸೌಮ್ಯದ ನೈವೇಲಿ ಲಿಗ್ನೈಟ್ ಕಾರ್ಪೊರೇಷನ್ (NLC) ಕಂಪೆನಿಯು ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೈವೇಲಿ ಲಿಗ್ನೈಟ್ ಕಾರ್ಪೊರೇಷನ್​ನ ಅಧಿಕೃತ ವೆಬ್​ಸೈಟ್​ nlcindia.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:

  • ಒಟ್ಟು ಹುದ್ದೆಗಳ ಸಂಖ್ಯೆ- 481
  • ಇಂಜಿನಿಯರಿಂಗ್ ಗ್ರಾಜುಯೇಟ್ ಅಪ್ರೆಂಟಿಸ್: 201 ಹುದ್ದೆಗಳು
  • ಇಂಜಿನಿಯರಿಂಗ್ ಅಲ್ಲದ ಪದವೀಧರ ಅಪ್ರೆಂಟಿಸ್: 105 ಹುದ್ದೆಗಳು
  • ತಂತ್ರಜ್ಞ (ಡಿಪ್ಲೊಮಾ) ಅಪ್ರೆಂಟಿಸ್: 175 ಹುದ್ದೆಗಳು

ಅರ್ಹತಾ ಮಾನದಂಡಗಳು: ಆಯಾ ವಿಭಾಗಕ್ಕೆ ವಿಭಿನ್ನ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.

ಆಯ್ಕೆ ಪ್ರಕ್ರಿಯೆ: ಡಿಪ್ಲೊಮಾ/ಪದವಿಯಲ್ಲಿ ಅಭ್ಯರ್ಥಿಗಳು ಪಡೆದ ಶೇಕಡಾವಾರು ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 24, 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಪ್ರವಾಸಿ ಟ್ಯಾಕ್ಸಿ ಯೋಜನೆಯಡಿ 2 ಲಕ್ಷದ ವರೆಗೆ ಸಹಾಯ ಧನಕ್ಕೆ ಅರ್ಜಿ ಆಹ್ವಾನ

Leave a Reply

Your email address will not be published. Required fields are marked *