10ನೇ ತರಗತಿ ಪಾಸ್ ಆಗಿದ್ದೀರಾ,ರಾಜ್ಯ ಪೊಲೀಸ್​ ಇಲಾಖೆಯಲ್ಲಿದೆ ಉದ್ಯೋಗಾವಕಾಶ.?

ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್ ksp.karnataka.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

KSP Constable Recruitment 2022: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿನ (KSP Recruitment) ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (CAR / DAR) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ (Karnataka State Police Recruitment) ಅಧಿಕೃತ ವೆಬ್‌ಸೈಟ್ ksp.karnataka.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಗೆ ಸಂಬಂಧಿಸಿದ ವಯೋಮಿತಿ, ವೇತನ, ವಿದ್ಯಾರ್ಹತೆ, ಅರ್ಜಿ ಶುಲ್ಕ, ಪ್ರಮುಖ ದಿನಾಂಕ, ಮೀಸಲಾತಿ ಸೇರಿದಂತೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ- 3484

ಅರ್ಹತಾ ಮಾನದಂಡಗಳು: ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ:

ಕನಿಷ್ಠ ವಯೋಮಿತಿ: 18 ವರ್ಷಗಳು

‘ಗರಿಷ್ಠ ವಯೋಮಿತಿ: 25 ವರ್ಷಗಳು

SC, ST, OBC (2A, 2B, 3A, 3B) ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ : 27 ವರ್ಷಗಳು

ಕರ್ನಾಟಕ ಬುಡಕಟ್ಟು ಜನಾಂಗದವರಿಗೆ ಗರಿಷ್ಠ ವಯೋಮಿತಿ: 30 ವರ್ಷಗಳು

ವೇತನ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 23500 ರಿಂದ 47650 ರೂ.ವರೆಗೆ ವೇತನ ಸಿಗಲಿದೆ.

ಅರ್ಜಿ ಶುಲ್ಕ:

ಸಾಮಾನ್ಯ ಅಭ್ಯರ್ಥಿಗಳಿಗೆ– 400 ರೂ.

ಪರಿಶಿಷ್ಟ ಜಾತಿ/ಪಂಗಡ, ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ- 200 ರೂ.

ಪ್ರಮುಖ ದಿನಾಂಕಗಳು:

 

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – ಸೆಪ್ಟೆಂಬರ್ 19, 2022

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 31, 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

 

ಸಹಾಯವಾಣಿ: ಆನ್​ಲೈನ್ ಮೂಲಕ ಅರ್ಜಿ ಭರ್ತಿ ಮಾಡುವ ಸಂದರ್ಭದಲ್ಲಿ ಸಮಸ್ಯೆ ಎದುರಾದರೆ ಅಥವಾ ಅಗತ್ಯ ಮಾಹಿತಿಗಾಗಿ ಈ ನಂಬರ್​ಗೆ ಕರೆ ಮಾಡಿ 080-22943346 ಸಹಾಯ ಪಡೆಯಬಹುದು.

Leave a Reply

Your email address will not be published. Required fields are marked *