ಹಾವೇರಿ: ಪಂಜಾಬ್ದ ಬಟಿಂಡಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕನ್ನಡಿಗ ಯೋಧ ಶಿವರಾಜ ಗಂಗಮ್ಮನವರ (23) ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಶಿಗ್ಗಾಂವಿ ತಾಲೂಕಿನ ಶೀಲವಂತಸೋಮಾಪುರ ಗ್ರಾಮದ ಶಿವರಾಜ ಗಂಗಮ್ಮನವರ 2016ರಲ್ಲಿ ಭಾರತೀಯ ಸೇನೆಗೆ ಸೇರ್ಪಡೆಯಾಗಿದ್ದರು. ನಿನ್ನೆ ರಾತ್ರಿ (ಅ.1) ರಂದು ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಯೋಧ ಶಿವರಾಜ ಗಂಗಮ್ಮನವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ವೀರಯೋಧ ಶಿವರಾಜ್ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.
ಗಣಿಗಾರಿಕೆಯ ಕ್ವಾರಿಯಲ್ಲಿ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು
Post Views: 62