ಮಿನಿ ಪಾಕಿಸ್ತಾನ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಯುವಕನ ಬಂಧನ

ಹಾಸನ: ತನ್ನ ಫೇಸ್ಬುಕ್ನ ಖಾತೆಯಲ್ಲಿ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಈ ಘಟನೆ ನಡೆದಿದೆ. ನೇಮನ್ (20) ಬಂಧಿತ ಯುವಕ. ಈದ್ಮಿಲಾದ್ ಹಬ್ಬ ಹಿನ್ನೆಲೆಯಲ್ಲಿ ಮುಸ್ಲಿಮರು ಹೆಚ್ಚಿರುವ ಚನ್ನರಾಯಪಟ್ಟಣದ ಬಾಗೂರು ರಸ್ತೆಯಲ್ಲಿ ರಸ್ತೆಯುದ್ದಕ್ಕೂ ಬಣ್ಣದ ತೋರಣಗಳನ್ನು ಕಟ್ಟಿ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿತ್ತು.
ವೆಲ್ಡಿಂಗ್ ಕೆಲಸ ಮಾಡುವ ನೇಮನ್ ಬಾಗೂರು ರಸ್ತೆ ಮಿನಿ ಪಾಕಿಸ್ತಾನ ಎಂದು ಸಾಮಾಜಿಕ ಜಾಲತಾಣದಲ್ಲಿ ಫೋಸ್ಟ್ ಹಾಕಿದ್ದ. ಒಂದು ಸಮುದಾಯದ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ನೇಮನ್ನನ್ನು ಚನ್ನರಾಯಪಟ್ಟಣ ನಗರಠಾಣೆ ಪೊಲೀಸರು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

santhbennur pushkarani 8ವರ್ಷಗಳ ವೈಭವದ ಸೇವೆ ಅಂತ್ಯ ಗೊಳಿಸಿದ ಮೊಮ್