Breaking | ಶಿವಮೂರ್ತಿ ಶರಣರಿಗೆ ಜೈಲೇ ಗತಿ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿರುವ ಶಿವಮೂರ್ತಿ ಶರಣರ ನ್ಯಾಯಾಂಗ ಬಂಧನದ ಅವಧಿ ಅ.21ರವರೆಗೆ ವಿಸ್ತರಣೆ ಮಾಡಿ ಚಿತ್ರದುರ್ಗದ 2ನೆ  ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್‌ ನ್ಯಾಯಾಧೀಶರು ಆದೇಶವನ್ನು ಹೊರಡಿಸಿದ್ದಾರೆ.

ಸದ್ಯ ಅವರು ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ಅವರ ಬಂಧನದ ಅವಧಿ ಮುಕ್ತಯವಾದ ಹಿನ್ನಲೆಯಲ್ಲಿ ಅವರುನ್ನು ಇಂದು ಚಿತ್ರದುರ್ಗದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಯಿತು. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಧೀಶೆ ಬಿ.ಕೆ.ಕೋಮಲಾ ನ್ಯಾಯಾಂಗದ ಅವಧಿಯನ್ನು ಅ.21ರವರೆಗೆ ವಿಸ್ತರಣೆ ಮಾಡಿದರು.

Leave a Reply

Your email address will not be published. Required fields are marked *