31 ವರ್ಷದೊಳಗೆ ಕರ್ನಾಟಕ ಮೂರು ಭಾಗ ಆಗುತ್ತೆ – ಗುರೂಜಿ ಭವಿಷ್ಯ

ಹಾಸನ: ದೇವರ ಸತ್ಯವಾಗಿ ಹೇಳುತ್ತೇನೆ. 31 ವರ್ಷದೊಳಗೆ ಕರ್ನಾಟಕ (Karnataka) ಮೂರು ಭಾಗ ಆಗಿ, ಮೂರು ಮುಖ್ಯಮಂತ್ರಿ, ಮೂವರು ರಾಜ್ಯಪಾಲರಾಗುತ್ತಾರೆ. ಇದು ಶಿವನ ಆಣೆಗೂ ಸತ್ಯ ಎಂದು ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮಾ (Narendra Babu Sharma) ಭವಿಷ್ಯ ನುಡಿದಿದ್ದಾರೆ.

ಹಾಸನಾಂಬೆ (Hasanamba Temple) ದೇವಿ ದರ್ಶನ ಪಡೆದು ಸುದ್ದಿಗಾರರೊಂದಿಗೆ ಮಾತನಾಡಿದ ಬ್ರಹ್ಮಾಂಡ ಗುರೂಜಿ (Brahmanda Guruji), ದೇಶದ ಬಗ್ಗೆ ಮಾತನಾಡಿದಾಗ ಟ್ರೋಲ್ ಮಾಡುತ್ತಾರೆ. ಪಾರ್ಲಿಮೆಂಟ್ ಏನು ಕಟ್ಟಿದ್ದಾರೆ ಅದು ಭಾರೀ ಘೋರವಾಗಿರುತ್ತದೆ ಎನ್ನುವುದನ್ನು ವೀರ ಬ್ರಹ್ಮಸ್ವಾಮಿ ಚರಿತ್ರೆಯಲ್ಲಿ ಬರೆದಿದ್ದಾರೆ. ತ್ರಿಕೋನಾತ್ಮಿಕ ದೀಪಿಕ, ಯಾವುದೇ ಪಾರ್ಲಿಮೆಂಟ್ ಗುಂಡಾಗಿರಬೇಕು, ಇಲ್ಲ ಚೌಕವಾಗಿರಬೇಕು, ಇಲ್ಲ ಚಂದ್ರ ಪೂರ್ತಿಯಾಗಿ ಕುಜನಾಂಶವಾಗಿರಬೇಕು. ತ್ರಿಕೋನ ಮಾಡಿದಾಗ ಉಗ್ರವಾಗಿರುತ್ತದೆ. ಇನ್ಮೇಲೆ ದೇಶದ ಮೇಲೆ, ಜನರ ಮೇಲೆ ಒತ್ತಾಯ, ಒತ್ತಡಗಳು ಜಾಸ್ತಿ ಆಗುತ್ತದೆ. ಮೊದಲು ಕದ್ದುಮುಚ್ಚಿ ಲಂಚ ತೆಗೆದುಕೊಳ್ಳುತ್ತಿದ್ದರು. ಈಗ ಎಲ್ಲಾ ಓಪನ್. ದಡಂದಶಗುಣಂ ಭಗವಂತ ಆ ಸಮಯಕ್ಕೆ ಬಂದೇ ಬರುತ್ತಾನೆ ಎಂದಿದ್ದಾರೆ.

 

Leave a Reply

Your email address will not be published. Required fields are marked *