ಕಾಂಗ್ರೆಸ್ ಪಕ್ಷದ 30 ಮುಖಂಡರನ್ನು 6 ವರ್ಷಗಳ ಕಾಲ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ

ಶಿಮ್ಲಾ: ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಯ (Himachal Pradesh Assembly Elections) ಮತ ಎಣಿಕೆಯ ಮುನ್ನವೇ ಕಾಂಗ್ರೆಸ್(Congress) ಪಕ್ಷ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ, ಪಕ್ಷ ವಿರೋಧಿ ಕಾರ್ಯವನ್ನು ಮಾಡಿದ್ದಕ್ಕಾಗಿ ಪಕ್ಷದಿಂದ ಉಚ್ಚಾಟಿಸಿ ಆದೇಶವನ್ನು ನೀಡಿದೆ. ಪಕ್ಷ ವಿರೋಧಿ ಚಟುವಟಿಕೆಯ ಕಾರಣಕ್ಕಾಗಿ 30 ಜಿಲ್ಲಾ ಪದಾಧಿಕಾರಿಗಳನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಕಾಂಗ್ರೆಸ್ ಪಕ್ಷವು ಉಚ್ಚಾಟಿಸಿದೆ..

ಹಿಮಾಚಲ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಪ್ರತಿಭಾ ಸಿಂಗ್ ಅವರು ಬ್ಲಾಕ್ ಕಾಂಗ್ರೆಸ್ ಸಮಿತಿ, ಚೋಪಾಲ್ ಅವರಿಂದ ಸ್ವೀಕರಿಸಿದ ನಿರ್ಣಯದ ಆಧಾರದ ಮೇಲೆ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.

ಚೋಪಾಲ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಹಾಲಿ ಶಾಸಕ ಬಲ್ಬೀರ್ ವರ್ಮಾ ವಿರುದ್ಧ ಕಾಂಗ್ರೆಸ್ ರಜನೀಶ್ ಕಿಮ್ತಾ ಅವರನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್ ತನ್ನ 2017 ರ ಅಭ್ಯರ್ಥಿ ಸುಭಾಷ್ ಮಂಗಳಾಟೆಗೆ ಟಿಕೆಟ್ ನೀಡಲಿಲ್ಲ, ಅವರು ಈಗ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.

Leave a Reply

Your email address will not be published. Required fields are marked *