NEP- ಇನ್ಮುಂದೆ ಕರ್ನಾಟಕದಲ್ಲಿ ಬೆಸ ಸೆಮಿಸ್ಟರ್‌ಗಳಲ್ಲಿ ವಿದ್ಯಾರ್ಥಿಗಳು ಬೇರೆ ಕಾಲೇಜಿಗೆ ವರ್ಗ ಆಗಬಹುದು!

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಕಾರ (National Education Policy) ಬೆಸ ಸೆಮಿಸ್ಟರ್‌ಗಳ (semesters) ಆರಂಭದಲ್ಲಿ ವಿದ್ಯಾರ್ಥಿಗಳನ್ನು ಒಂದು ಕಾಲೇಜಿನಿಂದ ಇನ್ನೊಂದು ಕಾಲೇಜಿಗೆ ವರ್ಗಾಯಿಸಲು ಅನುಕೂಲವಾಗುವಂತೆ ಸರ್ಕಾರ ನಿನ್ನೆ ಬುಧವಾರ ಆದೇಶ ಹೊರಡಿಸಿದೆ. ಒಂದೇ ವಿಶ್ವವಿದ್ಯಾನಿಲಯದಲ್ಲಿ ಅಥವಾ ಬೇರೆ ಯಾವುದಾದರೂ ಒಂದು ಸಂಯೋಜಿತ ಕಾಲೇಜಿನಿಂದ ಇನ್ನೊಂದಕ್ಕೆ ಬದಲಾಯಿಸಲು ಬಯಸುವ ವಿದ್ಯಾರ್ಥಿಗಳು (students) ಈ ಅವಕಾಶವನ್ನು ಬಳಸಿಕೊಳ್ಳಬಹುದು. ಎರಡೂ ಸಂದರ್ಭಗಳಲ್ಲಿ, ವಿದ್ಯಾರ್ಥಿಯ ಅನುತ್ತೀರ್ಣ ವಿಷಯಗಳನ್ನು ಹೊಸ ಕಾಲೇಜಿಗೆ ವರ್ಗಾಯಿಸಲಾಗುತ್ತದೆ.

ಬೆಸ ಸೆಮಿಸ್ಟರ್‌ಗಳಿಗೆ (1, 3, 5 ಅಥವಾ 7) ಅನ್ವಯವಾಗುವ ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ವಿದ್ಯಾರ್ಥಿಗಳಿಗೆ ಯುಯುಸಿಎಂಎಸ್ (ಏಕೀಕೃತ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ) ವೇದಿಕೆಯ ಮೂಲಕ ವರ್ಗಾವಣೆಯನ್ನು ಒದಗಿಸಲಾಗುವುದು ಎಂದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿಎನ್ ಅಶ್ವಥ್ ನಾರಾಯಣ್  ಹೇಳಿದ್ದಾರೆ.

ವಿದ್ಯಾರ್ಥಿಗಳಿಗೆ ಮಲ್ಟಿ-ಎಂಟ್ರಿ ಮತ್ತು ಮಲ್ಟಿ-ಎಕ್ಸಿಟ್ ಆಯ್ಕೆಗಳನ್ನು ಒದಗಿಸಲು ವಿಶ್ವವಿದ್ಯಾಲಯಗಳಿಗೆ ಈ ಸೂಚನೆ ನೀಡಲಾಗಿದೆ. ಈ ಸೌಲಭ್ಯದ ಪ್ರಕಾರ, ಎರಡು ಸೆಮಿಸ್ಟರ್‌ಗಳನ್ನು ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ನೀಡಬೇಕು. ನಾಲ್ಕು ಸೆಮಿಸ್ಟರ್‌ಗಳನ್ನು ಪೂರ್ಣಗೊಳಿಸಿದವರಿಗೆ ಡಿಪ್ಲೊಮಾ ನೀಡಬೇಕು. ಆರು ಸೆಮಿಸ್ಟರ್‌ಗಳನ್ನು ಪೂರ್ಣಗೊಳಿಸಿದ ನಂತರ, ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರವನ್ನು ನೀಡಬೇಕು ಮತ್ತು ಎಂಟು ಸೆಮಿಸ್ಟರ್‌ಗಳನ್ನು ಪೂರ್ಣಗೊಳಿಸಿದ ನಂತರ ಅವರಿಗೆ ಪದವಿ (ಗೌರವ) ಪ್ರಮಾಣಪತ್ರವನ್ನು ನೀಡಲಾಗುತ್ತದೆ.

ವಾಟ್ಸಪ್‌ ನ ಹೊಸ ಫಿಚರ್ ಬಗ್ಗೆ ಗೊತ್ತಾ ಇನ್ಮುಂದೆ ಸ್ಕ್ರೀನ್ ಶಟ್ ತೆಗಿಯೋಹಾಗಿಲ್ಲ

ಮಧ್ಯದಲ್ಲಿ ಕೋರ್ಸ್‌ನಿಂದ ನಿರ್ಗಮಿಸಿದವರು ಏಳು ವರ್ಷಗಳಲ್ಲಿ (ಮೊದಲ ಸೆಮಿಸ್ಟರ್‌ಗೆ ಪ್ರವೇಶದ ದಿನಾಂಕದಿಂದ) ಮರು ಪ್ರವೇಶ ಪಡೆಯಬಹುದು ಮತ್ತು ಹೆಚ್ಚಿನ ಅಧ್ಯಯನವನ್ನು ಮುಂದುವರಿಸಬಹುದು. ವಿದ್ಯಾರ್ಥಿಗಳು ಗಳಿಸಿದ ಕ್ರೆಡಿಟ್ ಪಾಯಿಂಟ್‌ಗಳನ್ನು ‘ಅಕಾಡೆಮಿಕ್ ಬ್ಯಾಂಕ್ ಆಫ್ ಕ್ರೆಡಿಟ್ಸ್’ಗೆ ಸೇರಿಸಲಾಗುತ್ತದೆ ಮತ್ತು ಆಯಾ ಪ್ರಮಾಣ ಪತ್ರವನ್ನು ನೀಡುವಾಗ ಪರಿಗಣಿಸಲಾಗುತ್ತದೆ.

Leave a Reply

Your email address will not be published. Required fields are marked *