ವಿಜಯಪುರ: ಯಡಿಯೂರಪ್ಪನವರನ್ನು (Yediyurappa) ಮುಖ್ಯಮಂತ್ರಿ ಮಾಡಿದ್ದು ನಾನೇ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (Kalyana Rajya Pragati Party) ಅಧ್ಯಕ್ಷ ಜನಾರ್ದನ ರೆಡ್ಡಿ (Janardhana Reddy) ಹೇಳಿದ್ದಾರೆ. ವಿಜಯಪುರದ (Vijayapura) ನಾಗಠಾಣ (Nagathan) ಗ್ರಾಮದಲ್ಲಿ ನಡೆದ ಜನಾಶೀರ್ವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಈ ವಿಚಾರವನ್ನು ತೆರೆದಿಟ್ಟಿದ್ದಾರೆ.

ಈ ಹಿಂದೆ ಬಿಜೆಪಿ ಪಕ್ಷ ಬಲವರ್ಧನೆಗೆ ಶ್ರಮಿಸಿದ್ದೆ. ಬಳ್ಳಾರಿಯ (Ballari) ಗ್ರಾಮ ಪಂಚಾಯಿತಿಯಿಂದ ಹಿಡಿದು ಜಿಲ್ಲಾ ಪಂಚಾಯತ್ ವರೆಗೂ ಬಿಜೆಪಿಯನ್ನು ಗೆಲ್ಲಿಸಿದ್ದೆ. 9 ರಿಂದ 10 ಶಾಸಕರು ಅಧಿಕಾರ ಹಿಡಿಯಲು ನಾನೇ ಕಾರಣ ಎಂದು ಅವರು ಹೇಳಿದ್ದಾರೆ.
ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಬಿಜೆಪಿ (BJP) ಸರ್ಕಾರ ಅಧಿಕಾರಕ್ಕೆ ಬರಲು ನನ್ನ ಶ್ರಮವಿತ್ತು. ಕರ್ನಾಟಕದಲ್ಲಿ ಬಿಜೆಪಿ ಅಧಿಕಾರ ಹಿಡಿದಾಗ ಜನರ ಆಶೀರ್ವಾದದಿಂದ ಯಡಿಯೂರಪ್ಪರನ್ನು ಮುಖ್ಯಮಂತ್ರಿನ್ನಾಗಿ ಮಾಡಿದ್ದು ನಾನು ಎಂಬ ಹೆಮ್ಮೆಯಿದೆ ಎಂದಿದ್ದಾರೆ
