ಟೀಂ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಅಧಿಕೃತ ಎಂಟ್ರಿ.

ಅಂತಿಮವಾಗಿ, ಟೀಂ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಅಧಿಕೃತವಾಗಿ ಟಿಕೆಟ್ ಪಡೆದುಕೊಂಡಿದೆ. ನ್ಯೂಜಿಲೆಂಡ್​ನ ಕ್ರೈಸ್ಟ್‌ಚರ್ಚ್​ನಲ್ಲಿ ನಡೆದ ನ್ಯೂಜಿಲೆಂಡ್ ಹಾಗೂ ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಅತಿಥೇಯ ಕಿವೀಸ್ ತಂಡ 2 ವಿಕೆಟ್​ಗಳ ರೋಚಕ ಜಯ ಸಾಧಿಸಿದೆ. ಈ ಮೂಲಕ ಟೀಂ ಇಂಡಿಯಾದ ಫೈನಲ್ ಕನಸನ್ನು ಸುಗಮಗೊಳಿಸಿದೆ. ವಾಸ್ತವವಾಗಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೇರಲು ಇಂಡಿಯಾ ಹಾಗೂ ಶ್ರೀಲಂಕಾ ನಡುವೆ ಪೈಪೋಟಿ ಏರ್ಪಟ್ಟಿತ್ತು. ಈಗಾಗಲೇ ಆಸ್ಟ್ರೇಲಿಯಾ ಫೈನಲ್​ಗೆ ಎಂಟ್ರಿಕೊಟ್ಟಿದ್ದು, ಎರಡನೇ ಫೈನಲಿಸ್ಟ್​ ಆಗಲು ಇಂಡಿಯಾ ಹಾಗೂ ಲಂಕಾ ನಡುವೆ ಸ್ಪರ್ಧೆ ಏರ್ಪಟ್ಟಿತ್ತು. ಹೀಗಾಗಿ ಇಂಡಿಯಾ ನೇರವಾಗಿ ಫೈನಲ್ಗೇರಬೇಕಿದ್ದರೆ ಆಸೀಸ್ ವಿರುದ್ಧದ ಟೆಸ್ಟ್ ಸರಣಿಯನ್ನು 3-0 ಅಥವಾ 3-1 ಅಂತರದಿಂದ ಗೆಲ್ಲಬೇಕಾಗಿತ್ತು.​ ಆದರೆ ಅಂತಿಮ ಟೆಸ್ಟ್ ಪಂದ್ಯ ಡ್ರಾದತ್ತ ಸಾಗಿರುವುದರಿಂದ ಭಾರತಕ್ಕೆ ಲಂಕಾ ಸೋಲುವುದು ಅನಿವಾರ್ಯವಾಗಿತ್ತು. ಇತ್ತ ಲಂಕಾ ಫೈನಲ್​ಗೇರಲು ನ್ಯೂಜಿಲೆಂಡ್ ವಿರುದ್ಧದ ಎರಡೂ ಟೆಸ್ಟ್ ಪಂದ್ಯಗಳನ್ನು ಗೆಲ್ಲಬೇಕಿತ್ತು.

ಆದರೆ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿಯೇ ರೋಚಕ ಸೋಲು ಅನುಭವಿಸಿರುವ ಶ್ರೀಲಂಕಾ ತಂಡ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ನಿಂದ ಹೊರಬಿದ್ದಿದೆ. ಹೀಗಾಗಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಅಂತಿಮ ಟೆಸ್ಟ್ ಪಂದ್ಯ ಡ್ರಾಗೊಂಡರು ಸಹ ಭಾರತ, ಫೈನಲ್​ಗೇರುವಲ್ಲಿ ಯಾವುದೇ ಅಡೆತಡೆಗಳಿಲ್ಲದಂತ್ತಾಗಿದೆ. ಇದೀಗ ಫೈನಲ್​ಗೇರುವ ಮೂಲಕ ಟೀಂ ಇಂಡಿಯಾ ಸತತ ಎರಡನೇ ಬಾರಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್ ತಲುಪಿದೆ ಸಾಧನೆ ಮಾಡಿದೆ.

Leave a Reply

Your email address will not be published. Required fields are marked *