Breaking- ಉರಿಗೌಡ ನಂಜೇಗೌಡ ಬಗ್ಗೆ ಟ್ವೀಟ್: ನಟ ಚೇತನ್ ಬಂಧನ

ನಟ, ಸಾಮಾಜಿಕ ಹೋರಾಟಗಾರ ಚೇತನ್ (Chetan) ಬಂಧನವಾಗಿದೆ. ಉರಿಗೌಡ (Urigowda) ನಂಜೇಗೌಡ (Nanjegowda) ವಿಚಾರವಾಗಿ ಅವರು ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದರು. ಈ ಕುರಿತು ಶಿವಕುಮಾರ್ (Shivakumar) ಎನ್ನುವವರು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರನ್ನು ಆಧರಿಸಿ ಶೇಷಾದ್ರಿಪುರಂ ಪೊಲೀಸರು ವಶಕ್ಕೆ ಪಡೆದು, ನ್ಯಾಯಾಲಯಕ್ಕೆ ಹಾಜರು ಪಡಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಚೇತನ್ ತಮ್ಮ ಫೇಸ್ ಬುಕ್ ಮತ್ತು ಟ್ವಿಟರ್ ಅಲ್ಲಿ ಉರೀಗೌಡ ನಂಜೇಗೌಡ ಬಗ್ಗೆ ಪೋಸ್ಟ್ ವೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ. ಸಾವರ್ಕರ್ ಹೇಳಿಕೆ, ರಾಮನು ರಾವಣನನ್ನು ಸೋಲಿಸಿ ಅಯೋಧ್ಯಗೆ ಹಿಂದಿರುಗಿದಾ ಭಾರತೀಯ ರಾಷ್ಟ್ರ ಪ್ರಾರಂಭವಾಯಿತು ಎನ್ನುವುದು ಇದು ಒಂದು ಸುಳ್ಳು. 1992ರಲ್ಲಿ ಬಾಬರಿ ಮಸೀದಿ ರಾಮನ ಜನ್ಮ ಭೂಮಿ ಕುರಿತು ಇದು ಒಂದು ಸುಳ್ಳು. ಈಗ 2023ರಲ್ಲಿ ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು ಎನ್ನುವುದು ಇದು ಕೂಡ ಒಂದು ಸುಳ್ಳು. ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು, ಸತ್ಯವೇ ಸಮಾನತೆ’ ಎಂದು ಪೋಸ್ಟ್ ನಲ್ಲಿ ಬರೆದಿದ್ದಾರೆ…

ಈ ಪೋಸ್ಟ್ ಅನ್ನು ಆಧರಿಸಿಯೇ ಶಿವಕುಮಾರ್ ಎಂಬುವರು ದೂರು ನೀಡಿದ್ದಾರೆ. ದೂರಿನಲ್ಲಿ ಚೇತನ್ ಅವರು ಹಿಂದೂ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಟ್ವೀಟ್ ಮಾಡಿದ್ದಾರೆ ಎಂದು ಉಲ್ಲೇಖಿಸಿದ್ದಾರೆ ಶಿವಕುಮಾರ್. ಈ ದೂರನ್ನು ಆಧರಿಸಿ ಎಫ್ ಐ ಆರ್ ದಾಖಲಿಸಿದ್ದ ಶೇಷಾದ್ರಿಪುರಂ ಪೊಲೀಸರು ನಟ ಚೇತನ್ ನನ್ನು ಬಂಧಿಸಿ ಕೋರ್ಟಿಗೆ ಹಾಜರುಪಡಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ..

 

 

Leave a Reply

Your email address will not be published. Required fields are marked *