Breaking: ಶಾಸಕ ಮಾಡಾಳು ವಿರುಪಾಕ್ಷಪ್ಪ ಜಾಮೀನು ರದ್ದು: ಯಾವುದೇ ಕ್ಷಣದಲ್ಲಿ ಬಂಧನ ಭೀತಿ

ಶಾಸಕ ಮಾಡಾಳು ವಿರುಪಾಕ್ಷಪ್ಪಗೆ ಸಂಕಷ್ಟ. ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗಿದೆ. ಲಂಚ ಸ್ವೀಕಾರ ಪ್ರಕರಣದಲ್ಲಿ ಎ1 ಆರೋಪಿ ಆಗಿದ್ದನು. ಈಗ ಜಾಮೀನು ರದ್ದುಗೊಳಿಸಲಾಗಿದೆ..

ಬೆಂಗಳೂರು (ಮಾ.27): ಶಾಸಕ ಮಾಡಾಳು ವಿರುಪಾಕ್ಷಪ್ಪಗೆ ಸಂಕಷ್ಟ. ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗಿದೆ. ಲಂಚ ಸ್ವೀಕಾರ ಪ್ರಕರಣದಲ್ಲಿ ಎ1 ಆರೋಪಿ ಆಗಿದ್ದನು. ಈಗ ಜಾಮೀನು ಜಾಮೂನು ರದ್ದುಗೊಳಿಸಲಾಗಿದ್ದು, ಯಾವುದೇ ಕ್ಷಣದಲ್ಲಿ ಶಾಸಕನ ಬಂಧನ ಆಗಲಿದೆ.

ಕಳೆದ ತಿಂಗಳು ಲೋಕಾಯುಕ್ತರು ಶಾಸಕ ಮಾಡಾಳು ವಿರುಪಾಕ್ಷಪ್ಪ ಅವರ ಬೆಂಗಳೂರಿನ ವೈಯಕ್ತಿಕ ಕಚೇರಿ ಮೇಲೆ ದಾಳಿ ಮಾಡಿದ್ದರು. ಈ ವೇಳೆ ಶಾಸಕರ ಪುತ್ರ ಮಾಡಾಳು ಪ್ರಶಾಂತ ಅವರು 40 ಲಕ್ಷ ರೂ. ಹಣವನ್ನು ಪಡೆಯುವ ವೇಳೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದಿದ್ದರು. ಇನ್ನು ಕಚೇರಿ ಹಾಗೂ ಮನೆಯ ಮೇಲೆ ದಾಳಿ ನಡೆಸಿದ ವೇಳೆ ಬರೋಬ್ಬರಿ 6 ಕೋಟಿ ರೂ. ಹಣ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ ಪೊಲೀಸರು ಒಟ್ಟು 6 ಜನ ಆರೋಪಿಗಳನ್ನಾಗಿ ಚಾರ್ಜ್‌ ಶೀಟ್‌ ಸಿದ್ಧಪಡಿಸಿದ್ದರು.

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆಎಸ್‌ಡಿಎಲ್‌) ಅಧ್ಯಕ್ಷರಾಗಿದ್ದ ಮಾಡಾಳು ವಿರುಪಾಕ್ಷಪ್ಪ ಖಾಸಗಿ ಕಂಪನಿಯೊಂದರ ಪ್ರಕರಣವನ್ನು ಖುಲಾಸೆ ಮಾಡುವ ಕಾರಣಕ್ಕೆ ಲಂಚ ಪಡೆಯುತ್ತಿದ್ದರು ಎಂದು ಆರೋಪಿಸಿ ಅವರನ್ನೇ ಎ1 ಆರೋಪಿಯನ್ನಾಗಿ ಮಾಡಲಾಗಿತ್ತು. ಉಳಿದಂತೆ ಅವರ ಪುತ್ರ ಮಾಡಾಳು ಪ್ರಶಾಂತ, ಹಣ ಕೊಡಲು ಬಂದಿದ್ದ ಕಂಪನಿಯ ಇಬ್ಬರು ವ್ಯಕ್ತಿಗಳು ಹಾಗೂ ಮಾಡಾಳು ವಿರುಪಾಕ್ಷಪ್ಪ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಸಿಬ್ಬಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

 

Leave a Reply

Your email address will not be published. Required fields are marked *