ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್

ಮಂಡ್ಯ: 40 ಸಾವಿರ ರೂ. ಲಂಚ (Bribery) ಪಡೆಯುತ್ತಿದ್ದ ವೇಳೆ ತಹಶೀಲ್ದಾರ್ (Tehsildar) ಒಬ್ಬರು ಲೋಕಾಯುಕ್ತ (Lokayukta) ಬಲೆಗೆ ಬಿದ್ದಿರುವ ಘಟನೆ ಮಂಡ್ಯ (Mandya) ಜಿಲ್ಲೆಯಲ್ಲಿ ನಡೆದಿದೆ. ಪಾಂಡವಪುರ ತಹಶೀಲ್ದಾರ್ ಸೌಮ್ಯಾ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ವಿಎ ವರ್ಗಾವಣೆ ವಿಚಾರಕ್ಕೆ ಸೌಮ್ಯಾ 40 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ವಿಎ ಮರಿಸ್ವಾಮಿ ಅವರನ್ನು ಗುಮ್ಮನಹಳ್ಳಿಯಿಂದ ದೊಡ್ಡಮ್ಮನಹಳ್ಳಿಗೆ ವರ್ಗಾವಣೆ ಮಾಡಲು ತಹಶೀಲ್ದಾರ್ ಸೌಮ್ಯಾ ಲಂಚ ಕೇಳಿದ್ದರು. ಈ ಬಗ್ಗೆ ಮರಿಸ್ವಾಮಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ಗುರುವಾರ ಲೋಕಾಯುಕ್ತ ಇನ್ಸ್ಪೆಕ್ಟರ್ ಬ್ಯಾಟರಾಯಗೌಡ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ತಹಶೀಲ್ದಾರ್ ಕಚೇರಿಯಲ್ಲಿ 40 ಸಾವಿರ ರೂ. ಲಂಚ ತೆಗೆದುಕೊಳ್ಳುತ್ತಿದ್ದಾಗ ಸೌಮ್ಯಾ ಸಿಕ್ಕಿಬಿದ್ದಿದ್ದಾರೆ

Leave a Reply

Your email address will not be published. Required fields are marked *