ಅಸ್ಸಾಂನಲ್ಲಿ ಆರಂಭಿಸಿರುವ ಚುನಾವಣಾ ಆಯೋಗದ ಡಿಲಿಮಿಟೇಶನ್ ಪ್ರಕ್ರಿಯೆಯನ್ನು ತಡೆಹಿಡಿಯಲು ಸುಪ್ರೀಂಕೋರ್ಟ್ ನಿರಾಕರಿಸಿದ್ದು, ರಾಜ್ಯದಲ್ಲಿ ಡಿಲಿಮಿಟೇಶನ್ ಪ್ರಕ್ರಿಯೆ ಕುರಿತು ಯಾವುದೇ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲು ಚುನಾವಣಾ ಸಮಿತಿಯನ್ನು ತಡೆಯುವ ಯಾವುದೇ ಆದೇಶವನ್ನು ನೀಡುವುದಿಲ್ಲ ಎಂದು ಹೇಳಿದೆ.
ದಿಸ್ಪುರ್ – ಅಸ್ಸಾಂನ (Assam) 126 ಅಸೆಂಬ್ಲಿ ಕ್ಷೇತ್ರಗಳು ಮತ್ತು 14 ಲೋಕಸಭಾ ಕ್ಷೇತ್ರಗಳ ವಿಂಗಡಣೆಗಾಗಿ ಭಾರತ ಚುನಾವಣಾ ಆಯೋಗದ (ECI) ಇತ್ತೀಚಿನ ಕರಡು ಪ್ರಸ್ತಾವನೆಯನ್ನು ಪ್ರಶ್ನಿಸಿ ಅಸ್ಸಾಂನ ವಿರೋಧ ಪಕ್ಷದ ನಾಯಕರು ಸಲ್ಲಿಸಿದ ಮನವಿಯ ಮೇಲೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ. ಮೂರು ವಾರಗಳಲ್ಲಿ ಅಫಿಡವಿಟ್ ಸಲ್ಲಿಸುವಂತೆ ಸುಪ್ರೀಂಕೋರ್ಟ್ ಕೇಂದ್ರಕ್ಕೆ ಸೂಚಿಸಿದೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಅಸ್ಸಾಂನಲ್ಲಿ ಆರಂಭಿಸಿರುವ ಚುನಾವಣಾ ಆಯೋಗದ ಡಿಲಿಮಿಟೇಶನ್ ಪ್ರಕ್ರಿಯೆಯನ್ನು ತಡೆಹಿಡಿಯಲು ಸುಪ್ರೀಂಕೋರ್ಟ್ ನಿರಾಕರಿಸಿದ್ದು, ರಾಜ್ಯದಲ್ಲಿ ಡಿಲಿಮಿಟೇಶನ್ ಪ್ರಕ್ರಿಯೆ ಕುರಿತು ಯಾವುದೇ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲು ಚುನಾವಣಾ ಸಮಿತಿಯನ್ನು ತಡೆಯುವ ಯಾವುದೇ ಆದೇಶವನ್ನು ನೀಡುವುದಿಲ್ಲ ಎಂದು ಹೇಳಿದೆ.
Supreme Court issues notice to the Centre on a plea filed by opposition leaders from Assam challenging the recent draft proposal of the Election Commission of India (ECI) for the delimitation of Assam's 126 Assembly constituencies and 14 Lok Sabha constituencies.
Supreme Court… pic.twitter.com/LYdxPBmewn
— ANI (@ANI) July 24, 2023