ಮುಳ್ಳಯ್ಯನಗಿರಿಗೆ ಭೇಟಿ ನೀಡುವ ಪ್ರವಾಸಿಗರಿಗೆ ನಿರ್ಬಂಧ – ಮಾರ್ಗ ಬಂದ್

ಚಿಕ್ಕಮಗಳೂರು, ಜುಲೈ 25: ಕಾಫಿನಾಡು ಚಿಕ್ಕಮಗಳೂರಿನಲ್ಲಿ(Chikmagalur Rain) ವರುಣ ಆರ್ಭಟ ಮುಂದುವರೆದಿದೆ. ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಭಾರೀ ಮಳೆ ಹಿನ್ನೆಲೆ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ(Mullayanagiri) ಮಾರ್ಗದಲ್ಲಿ ಭಾರೀ ಗುಡ್ಡ ಕುಸಿದಿದೆ. ಹೀಗಾಗಿ ಮುಳ್ಳಯ್ಯನಗಿರಿ ಮಾರ್ಗದಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿದೆ(Mullayanagiri Route Close). ಹಾಗೂ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಮುಳ್ಳಯ್ಯನಗಿರಿ ರಸ್ತೆ ಮಾರ್ಗದಲ್ಲಿ ಹತ್ತಕ್ಕೂ ಅಧಿಕ ಕಡೆ ಗುಡ್ಡ ಕುಸಿದಿದ್ದು ರಸ್ತೆಗೆ ಅಡ್ಡಲಾಗಿ ಗುಡ್ಡದ ಮಣ್ಣು ಬೀಳುತ್ತಲೇ ಇದೆ. ಮುಂಜಾಗ್ರತಾ ಕ್ರಮವಾಗಿ ಬ್ಯಾರಿಕೇಡ್ ಹಾಕಿ ವಾಹನ ಸಂಚಾರ ಬಂದ್ ಮಾಡಲಾಗಿದೆ

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗ ಮಲೆನಾಡಾಗಿ ಮಾರ್ಪಟ್ಟಿದೆ. ಕಳೆದ ಮೂರು ದಿನದಿಂದ ಸುರಿಯುತ್ತಿರುವ ಮಳೆಗೆ ಚಿಕ್ಕಮಗಳೂರು ಜಿಲ್ಲೆಯ‌ ಶೃಂಗೇರಿ, ಕಳಸ, ಮೂಡಿಗೆರೆ, ಕೊಪ್ಪ, ಎನ್​ಆರ್ ಪುರ ತಾಲೂಕಿನಾದ್ಯಂತ ಆತಂಕ ಮೂಡಿಸಿದೆ. ಒಂದೇ ಸಮನೆ ಸುರಿಯುತ್ತಿರುವ ಮಳೆಯಿಂದ ತುಂಗಾ, ಭದ್ರಾ, ಹೇಮಾವತಿ ನದಿಗಳು ಅಪಾಯದ ಮಟ್ಟ ಮೀರಿ ಆರ್ಭಟಿಸುತ್ತಿವೆ. ಶೃಂಗೇರಿ ಶಾರದಾಂಬೆ ದೇವಾಲಯದ ಬಳಿ ತುಂಗಾ ನದಿ ನೆರೆ ಆತಂಕವನ್ನ ಸೃಷ್ಟಿ ಮಾಡಿದ್ದು ಕಪ್ಪೆ ಶಂಕರ ‌ದೇವಾಲಯ ಸೇರಿದಂತೆ ‌ಗುರು ನಿವಾಸಕ್ಕೆ ತೆರಳುವ ಮಾರ್ಗದಲ್ಲಿರುವ ತೆಂಗಿನ ತೋಟ ಸಂಪೂರ್ಣ ಜಲಾವೃತಗೊಂಡಿದೆ. ಸಂಧ್ಯಾ ವಂದನ ಮಂಟಪ ಮುಳುಗಡೆಯಾಗಿದೆ. ದೇವಾಲಯ ಪಕ್ಕದಲ್ಲಿರುವ ಪ್ಯಾರಲ್ ಮಾರ್ಗ ಗಾಂಧಿ ಮೈದಾನದಲ್ಲಿ ತುಂಗಾ ನದಿ ರಭಸವಾಗಿ ಹರಿಯುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ದೇವಾಲಯ ಬಳಿ ಅಗ್ನಿಶಾಮಕ ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿದೆ.

ಪದವೀಧರರಿಗೆ ಸುವರ್ಣಾವಕಾಶ-ಕೆನರಾ ಬ್ಯಾಂಕ್ ನೇಮಕಾತಿ

ದತ್ತಪೀಠಕ್ಕೆ ತೆರಳುವ ಮಾರ್ಗ ಮಧ್ಯೆ ಗುಡ್ಡ ಕುಸಿತ

ಪಶ್ಚಿಮ ಘಟ್ಟಗಳ ಸಾಲಿನ‌ ಚಂದ್ರದ್ರೋಣ ಪರ್ವತದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಚಿಕ್ಕಮಗಳೂರಿನಿಂದ ದತ್ತಪೀಠಕ್ಕೆ ತೆರಳುವ ಮಾರ್ಗ ಮಧ್ಯೆ ಗುಡ್ಡ ಕುಸಿದಿದ್ದು ರಸ್ತೆ ಬಂದ್ ಆಗುವ ಆತಂಕ ಎದುರಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಗುಡ್ಡ ಕುಸಿಯುತ್ತಿದ್ದು ಸಾವಿರಾರು ಪ್ರವಾಸಿಗರು ಅದೇ ರಸ್ತೆಯಲ್ಲಿ ಸಂಚಾರ ಮಾಡುತ್ತಿದ್ದಾರೆ. ತರೀಕೆರೆ ತಾಲೂಕಿನ ಕಲ್ಲತ್ತಿಗಿರಿ ಜಲಪಾತ ಮೈದುಂಬಿ ಹರಿಯುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಜಲಪಾತದ ಬಳಿ ಪ್ರವಾಸಿಗರನ್ನ ತೆರಳದಂತೆ ನಿಷೇಧವನ್ನ ಮಾಡಲಾಗಿದೆ. ಕೊಪ್ಪ ಸಮೀಪದ ಬಸರೀಕಟ್ಟೆ ಗ್ರಾಮದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ಕಾಂಪೌಂಡ್ ಕುಸಿದಿದೆ.

Leave a Reply

Your email address will not be published. Required fields are marked *