ಬೆಳಗಾವಿಯಲ್ಲಿ ಮೋಡ ಬಿತ್ತನೆ ಆರಂಭ

ಬೆಳಗಾವಿಯಲ್ಲಿ ಮೋಡ ಬಿತ್ತನೆ ಆರಂಭ

ಶುಕ್ರವಾರ ಮತ್ತು ಶನಿವಾರ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಮೋಡ ಬಿತ್ತನೆ ಕಾರ್ಯ ನಡೆಯಲಿದೆ. ಕ್ಯಾಪ್ಟನ್ ವೀರೇಂದ್ರ ಸಿಂಗ್ ಹಾಗೂ ಕ್ಯಾಪ್ಟನ್ ಆದರ್ಶ್‌ ಪಾಂಡೆ ನೇತೃತ್ವದಲ್ಲಿ ವಿಟಿ-ಕೆಸಿಎಂ ವಿಮಾನವು ಮೋಡ ಬಿತ್ತನೆ ಆರಂಭಿಸಿತು. 

ಬೆಳಗಾವಿ(ಸೆ.30): ಬರದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ರೈತರ ಅನುಕೂಲಕ್ಕಾಗಿ ಹುದಲಿಯ ಬೆಳಗಾಂ ಶುಗರ್ಸ್ ಪ್ರೈ. ಲಿಮಿಟೆಡ್‌ ವತಿಯಿಂದ ಕೈಗೊಂಡಿರುವ ಮೋಡ ಬಿತ್ತನೆ ಕಾರ್ಯಕ್ಕೆ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಚಾಲನೆ ನೀಡಿದರು.

ಶುಕ್ರವಾರ ಮತ್ತು ಶನಿವಾರ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಮೋಡ ಬಿತ್ತನೆ ಕಾರ್ಯ ನಡೆಯಲಿದೆ. ಕ್ಯಾಪ್ಟನ್ ವೀರೇಂದ್ರ ಸಿಂಗ್ ಹಾಗೂ ಕ್ಯಾಪ್ಟನ್ ಆದರ್ಶ್‌ ಪಾಂಡೆ ನೇತೃತ್ವದಲ್ಲಿ ವಿಟಿ-ಕೆಸಿಎಂ ವಿಮಾನವು ಮೋಡ ಬಿತ್ತನೆ ಆರಂಭಿಸಿತು. ಕಡಿಮೆ ಎತ್ತರದಲ್ಲಿರುವ ಮೋಡಗಳ ಆಕರ್ಷಣೆಗೆ ಸಿಎಸಿಎಲ್-2 ಅಯೋಡೈಡ್ ಹಾಗೂ 20 ಸಾವಿರ ಅಡಿ ಎತ್ತರದಲ್ಲಿರುವ ಮೋಡಗಳ ಆಕರ್ಷಣೆಗೆ ಸಿಲ್ವರ್ ಐಯೋಡೈಡ್ ರಾಸಾಯನಿಕ ಸಿಂಪಡಿಸಲಾಗುತ್ತದೆ. ಒಂದು ವೇಳೆ ನಿರ್ದಿಷ್ಟ ಪ್ರದೇಶ ವ್ಯಾಪ್ತಿಯಲ್ಲಿ ಮೋಡಗಳಿದ್ದರೆ ರಾಸಾಯನಿಕ ಸಿಂಪಡಣೆ ಮಾಡಿದ 5 ನಿಮಿಷಗಳಲ್ಲಿ ಮಳೆ ಬರಬಹುದು.

ಒಂದು ವೇಳೆ ಮೋಡಗಳು ಇರದಿದ್ದಲ್ಲಿ ವಿಮಾನ ವಾಪಸ್‌ ಆಗಲಿದೆ ಎಂದು ಮೋಡ ಬಿತ್ತನೆ ವಿಮಾನದ ತಾಂತ್ರಿಕ ಸಿಬ್ಬಂದಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಮೋಡಗಳು ಕಂಡುಬಂದಿರುವುದರಿಂದ ಮೋಡ ಬಿತ್ತನೆಗೆ ಪೂರಕ ವಾತಾವರಣವಿದೆ ಎಂದು ಸಂಸ್ಥೆಯ ಅಧಿಕಾರಿಗಳು ಮಾಹಿತಿ ನೀಡಿದರು.

ಬೆಳಗಾವಿ ಜಿಲ್ಲೆಯಲ್ಲಿ ಮೋಡ ಬಿತ್ತನೆ ಕಾರ್ಯ ಯಶಸ್ವಿಯಾದರೆ ಸರ್ಕಾರ ಅನುಮತಿ ನೀಡಿದರೆ ಮಡಿಕೇರಿ, ಹಾಸನ ಜಿಲ್ಲೆ(ಕಾವೇರಿ ಭಾಗದಲ್ಲಿ)ಯಲ್ಲೂ ಮೋಡ ಬಿತ್ತನೆ ಮಾಡಲಾಗುವುದು. ಬೆಳಗಾವಿ ಜಿಲ್ಲಾದ್ಯಂತ 3 ದಿನ ಮೋಡ ಬಿತ್ತನೆಯ ಗುರಿ ಇಟ್ಟುಕೊಂಡಿದ್ದು, ಈಗಾಗಲೇ ಮೊದಲ ದಿನ ಗೋಕಾಕ ಮತ್ತು ಖಾನಾಪುರದಲ್ಲಿ ಬಿತ್ತನೆ ಕಾರ್ಯ ನಡೆದಿದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದರು..

 

Leave a Reply

Your email address will not be published. Required fields are marked *