ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ

ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ

ಧಾರವಾಡ (ಕರ್ನಾಟಕ ವಾರ್ತೆ): ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಾರ್ಯಲಯ ಹಾಗೂ ಜನತಾ ಶಿಕ್ಷಣ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಫೆಬ್ರವರಿ 8 ಮತ್ತು 9 ರಂದು ಬೆಳಿಗ್ಗೆ 10 ಗಂಟೆಗೆ ವಿದ್ಯಾಗಿರಿ ಜೆ.ಎಸ್.ಎಸ್. ಆವರಣದ ಸನ್ನಿಧಿ ಕಲಾಕ್ಷೇತ್ರದಲ್ಲಿ ಏರ್ಪಡಿಸಲಾಗಿದೆ.

ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ

ಮುರುಘಾಮಠದ ಡಾ. ಮಲ್ಲಿಕಾರ್ಜುನ ಮಹಾಸ್ವಾಮಿಗಳು ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸುವರು. ಕಾರ್ಯಕ್ರಮದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ, ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಪ್ರಲ್ಹಾದ ಜೋಶಿ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಘನ ಉಪಸ್ಥಿತರಿರುವರು. ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್.ಲಾಡ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಕರ್ನಾಟಕ ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ, ಶಾಸಕರು ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯ ಅಧ್ಯಕ್ಷ ವಿನಯ ಕುಲಕರ್ಣಿ, ಶಾಸಕ ಹಾಗೂ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಬ್ಬಯ್ಯ ಪ್ರಸಾದ, ಶಾಸಕ ಹಾಘೂ ವಾಯವ್ಯ ಸಾರಿಗೆ ನಿಗಮದ ಅಧ್ಯಕ್ಷ ಭರಮಗೌಡ ಅಲಗೌಡ ಕಾಗೆ, ಶಾಸಕರು ಹಾಗೂ ಕರ್ನಾಟಕ ಕೈಮಗ್ಗ ನಿಗಮದ ಅಧ್ಯಕ್ಷರಾದ ಜೆ.ಎಂ.ಗಣೇಶ ಅವರು ವಿಶೇಷ ಅತಿಥಿಗಳಾಗಿ ಆಗಮಿಸುವರು. ಶಾಸಕರಾದ ಅರವಿಂದ ಬೆಲ್ಲದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಶಾಸಕರಾದ ಎನ್.ಎಚ್ ಕೋನರಡ್ಡಿ, ಎಸ್.ವ್ಹಿ.ಸಂಕನೂರ, ಪ್ರದೀಪ ಶೆಟ್ಟರ, ಮಹೇಶ ಟೆಂಗಿನಕಾಯಿ, ಎಂ.ಆರ್.ಪಾಟೀಲ್, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ವೀಣಾ ಚೇತನ ಭರದ್ವಾಡ ಅವರು ಭಾಗವಹಿಸುವರು.

ವಿಶೇಷ ಆಹ್ವಾನಿತರಾಗಿ ಬೆಂಗಳೂರಿನ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಿತೇಶ ಕುಮಾರ ಸಿಂಗ್, ಕೆ.ಯು.ಐ.ಡಿ.ಎಫ್.ಸಿಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಧಾರವಾಡದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ದೀಪಾ ಚೋಳನ್, ಶಾಲಾ ಶಿಕ್ಷಣ ಇಲಾಖೆಯ ಆಯುಕ್ತೆ ಬಿ.ಬಿ. ಕಾವೇರಿ, ಕರ್ನಾಟಕ ಸಮಗ್ರ ಶಿಕ್ಷಣದ ರಾಜ್ಯ ಯೋಜನಾ ನಿರ್ದೇಶಕ ಕೆ.ಎನ್.ರಮೇಶ, ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕಿ ಸಿಂಧು ಬಿ.ರೂಪೇಶ, ಕಲಬುರಗಿ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಎಸ್.ಆಕಾಶ, ಧಾರವಾಡದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತೆ ಜಯಶ್ರೀ ಶಿಂತ್ರಿ ಸೇರಿದಂತೆ ಇತರ ಅಧಿಕಾರಿಗಳು, ವಿವಿಧ ಜನ ಪ್ರತಿನಿಧಿಗಳು ಭಾಗವಹಿಸುವರೆಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್.ಕೆಳದಿಮಠ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *