KPSC RECRUITMENT-ಗ್ರೂಪ್ ಸಿ ಹುದ್ದೆಗಳ ಭರ್ತಿ; ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಿದ ಕೆಪಿಎಸ್ಸಿ

ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗದಿಂದ (ಕೆಪಿಎಸ್ಸಿ) ಈ ಹಿಂದೆ ಅಧಿಸೂಚನೆ ಹೊರಡಿಸಲಾಗಿದ್ದ ಗ್ರೂಪ್ ಸಿಯಲ್ಲಿನ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ ಮಾಡಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.ವಿವಿಧ ಇಲಾಖೆಯಲ್ಲಿನ 76 ಗ್ರೂಪ್ ಸಿ ಹುದ್ದೆಗಳು ಸೇರಿದಂತೆ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯಲ್ಲಿನ ಕೈಗಾರಿಕಾ ವಿಸ್ತರಣಾಧಿಕಾರಿ 63 ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಕೆ ವಿಸ್ತರಿಸಲಾಗಿದೆ.

ಈ ಹಿಂದೆ ಈ ಹುದ್ದೆಗಳಿಗೆ ಬಿಎಸ್ಸಿ, ಬಿಬಿಎ ಮತ್ತು ಬಿಇ ಪದವಿ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ನೀಡಲಾಗಿತ್ತು. ಇದೀಗ ಬಿಬಿಎಂ ಮತ್ತು ಬಿ.ಟೆಕ್ ಪದವಿ ಅಭ್ಯರ್ಥಿಗಳಿಗೂ ಕೂಡ ಅರ್ಜಿ ಸಲ್ಲಿಕೆಗೆ ಅವಕಾಶ ಒದಗಿಸಲಾಗಿದೆ.ವಯೋಮಿತಿ: ಈ ಹುದ್ದೆಗೆ ಅರ್ಜ ಸಲ್ಲಿಸಲು ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 35 ವರ್ಷ ಆಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1ರ ಅಭ್ಯರ್ಥಿಗಳಿಗೆ 5 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.ಆಯ್ಕೆ: ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಈ ಹುದ್ದೆಗೆ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅಭ್ಯರ್ಥಿಗಳು ಜುಲೈ 23ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್ 1 ಆಗಿದೆ.ಈ ಹುದ್ದೆಗಳ ಕುರಿತಾದ ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್ಸೈಟ್ನಲ್ಲಿ kpsc.kar.nic.in ಗೆ ಭೇಟಿ ನೀಡಬಹುದಾಗಿದೆ.

SBI ಬ್ಯಾಂಕ್‌ನಿಂದ ಭರ್ಜರಿ ಜಾಬ್‌ ಆಫರ್: 1040 ಹುದ್ದೆಗೆ ಅರ್ಜಿ ಆಹ್ವಾನ

Leave a Reply

Your email address will not be published. Required fields are marked *