ಬೆಂಗಳೂರು: ಕಬ್ಬಿನ ಉಪ ಉತ್ಪನ್ನವಾದ (Cane Byproducts) ಎಥೆನಾಲ್ ಲಾಭಾಂಶವನ್ನು ರೈತರಿಗೆ ನೀಡುವ ಸಂಬಂಧ ಸರ್ಕಾರ ಈಚೆಗೆ ನಿರ್ಧಾರ ಕೈಗೊಂಡಿತ್ತು. ಅದರಂತೆ ಇಂದು ಆದೇಶ ಹೊರಡಿಸಿದ್ದು, ಪ್ರತಿ ಮೆಟ್ರಿಕ್ ಟನ್‌ಗೆ 50 ರೂ. ಹೆಚ್ಚುವರಿಯಾಗಿ ಪಾವತಿಸುವ ಸಂಬಂಧ ಸರ್ಕಾರ (Karnataka Government) ತಿಳಿಸಿದೆ.

ಕಬ್ಬಿನ ಉಪ ಉತ್ಪನ್ನಗಳ ಲಾಭಾಂಶ ಬೇಕು ಎಂದು ಆಗ್ರಹಿಸಿ ರೈತರು ಹೋರಾಟ ನಡೆಸುತ್ತಿದ್ದರು. ಸಕ್ಕರೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ (Shankar Patil Munenakoppa) ಅವರು ಡಿ.5ರಂದು ನಡೆದ ಕಬ್ಬು ನಿಯಂತ್ರಣ ಮಂಡಳಿಯ ಸಭೆಯಲ್ಲಿ ಪ್ರತಿ ಮೆಟ್ರಿಕ್ ಟನ್‌ಗೆ 50 ರೂ. ಹೆಚ್ಚುವರಿಯಾಗಿ ಪಾವತಿಸುವ ಘೋಷಣೆ ಮಾಡಿದ್ದು, ಅದೇ ಪ್ರಕಾರವಾಗಿ ಆದೇಶ ಹೊರಡಿಸಲಾಗಿದೆ.
