Mysuru – ಕೋಟ್ಯಂತರ ಚಿನ್ನ ವಂಚನೆ ಪ್ರಕರಣ: ಮೋಸಹೋಗಿರುವವರು ಸಿಸಿಬಿಗೆ ಬನ್ನಿ ಎಂದ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್

ಮೈಸೂರು: ಗ್ರಾಹಕರಿಂದ ಚಿನ್ನಾಭರಣ ಪಡೆದು ಕರಗಿಸಿ ದುರುಪಯೋಗಪಡಿಸಿಕೊಂಡು ಕೋಟ್ಯಂತರ ರೂಪಾಯಿ ವಂಚನೆ ಎಸಗಿದ ಆರೋಪದ ಮೇಲೆ ಸೌಂದರ್ ರಾಜ್ ಅಲಿಯಾಸ್ ಚಿನ್ನತಂಬಿ ವಿರುದ್ಧ ಮೈಸೂರು ನಗರ ಪೊಲೀಸ್ ಆಯುಕ್ತೆ Seema Latkar ಕಠಿಣ ಕ್ರಮ ಕೈಗೊಂಡಿದ್ದಾರೆ.

ಈ ಸಂಬಂಧ Kuvempunagar Police Station ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು City Crime Branch ಗೆ ವರ್ಗಾಯಿಸಲಾಗಿದೆ.

ಆರೋಪಿ ಸೌಂದರ್ ರಾಜ್ ಅಲಿಯಾಸ್ ಚಿನ್ನತಂಬಿ ವಿವಿಧ ಚಿನ್ನದ ವ್ಯವಹಾರ ಸಂಸ್ಥೆಗಳ ಹೆಸರಿನಲ್ಲಿ ಮಾರುಕಟ್ಟೆ ದರಕ್ಕಿಂತ ಕಡಿಮೆ ಬಡ್ಡಿದರ ಹಾಗೂ ಹೆಚ್ಚಿನ ಬೆಲೆಗೆ ಚಿನ್ನ ಖರೀದಿಸುವುದಾಗಿ ಸಾರ್ವಜನಿಕರನ್ನು ನಂಬಿಸಿದ್ದಾನೆ ಎನ್ನಲಾಗಿದೆ. ಬಳಿಕ ಗ್ರಾಹಕರ ಚಿನ್ನಾಭರಣಗಳನ್ನು ಖರೀದಿಸಿ ಅಥವಾ ಗಿರವಿ ಇಟ್ಟುಕೊಂಡು ನಿಗದಿತ ಮೊತ್ತ ನೀಡದೇ, ಅವುಗಳನ್ನು ಕರಗಿಸಿ ದುರುಪಯೋಗಪಡಿಸಿಕೊಂಡು ವಂಚನೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ಸೌಂದರ್ ರಾಜ್ ಬಳಿ ಚಿನ್ನ ಅಡವಿಟ್ಟು ಅಥವಾ ಮಾರಾಟ ಮಾಡಿ ಮೋಸಹೋಗಿರುವ ಸಾರ್ವಜನಿಕರು ತಕ್ಷಣ ಮೈಸೂರು ನಗರದ ಸಿಸಿಬಿ ಕಚೇರಿಗೆ ಭೇಟಿ ನೀಡಿ ಸಹಾಯಕ ಪೊಲೀಸ್ ಆಯುಕ್ತರನ್ನು ಸಂಪರ್ಕಿಸಬೇಕು ಎಂದು ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಮನವಿ ಮಾಡಿದ್ದಾರೆ. ಮುಂದಿನ ಕಾನೂನು ಕ್ರಮಕ್ಕಾಗಿ ತಮ್ಮ ಬಳಿ ಇರುವ ದಾಖಲಾತಿಗಳನ್ನು ಸಲ್ಲಿಸುವಂತೆ ಸೂಚಿಸಲಾಗಿದೆ.

ಪೊಲೀಸರ ಕ್ರಮದಿಂದ ವಂಚನೆಗೆ ಒಳಗಾದ ನೂರಾರು ಗ್ರಾಹಕರು ನಿಟ್ಟುಸಿರು ಬಿಟ್ಟಿದ್ದು, ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

Leave a Reply

Your email address will not be published. Required fields are marked *